Loading

wait a moment

ಬಿಗ್ ನ್ಯೂಸ್: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿದ್ಧವಾಯ್ತು ಹೊಸ ‘ಸೂತ್ರ

’ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಮಾಡುತ್ತಿರುವ ತಂತ್ರಕ್ಕೆ ಪ್ರತಿತಂತ್ರ ಹೆಣೆದು ಶತಾಯಗತಾಯ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿ ನಾಯಕರು ಮುಂದಾಗಿದ್ದು, ಇದಕ್ಕಾಗಿ ಹೊಸ ಸೂತ್ರವೊಂದನ್ನು ರೂಪಿಸಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ನಿಷ್ಠಾವಂತ ಸಚಿವರುಗಳಿಂದ ರಾಜೀನಾಮೆ ಪಡೆಯಲು ಚಿಂತನೆ ನಡೆಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈಗಾಗಲೇ ತಮ್ಮ ಆಪ್ತರಾದ ಮೂವರು ಜೆಡಿಎಸ್ ಸಚಿವರಿಗೆ ಈ ಕುರಿತು ಸೂಚನೆ ನೀಡಿದ್ದಾರೆನ್ನಲಾಗಿದೆ. ಕಾಂಗ್ರೆಸ್ ನಾಯಕರು ಕೂಡಾ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದು, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಸಚಿವರುಗಳು ಸಭೆ ನಡೆಸಲಿದ್ದಾರೆ. ಹೊಸ ಸೂತ್ರದ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದು, ನಿಷ್ಠಾವಂತ ಸಚಿವರುಗಳು ರಾಜೀನಾಮೆ ನೀಡಿದ ಬಳಿಕ ಆ ಸ್ಥಾನಗಳನ್ನು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಬೀಡುಬಿಟ್ಟಿರುವ ಅತೃಪ್ತರಿಗೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *